ಚುನಾವಣಾ ಅಖಾಡಕ್ಕಿಳಿಯಲಿರುವ ಫೈರಿಂಗ್ ಸ್ಟಾರ್ ..?

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ನಟ ಹುಚ್ಚ ವೆಂಕಟ್ ಸ್ಪರ್ಧಿಸಲು ಮುಂದಾಗಿದ್ದಾರೆ. ಈ ಸಂಬಂಧ ಪತ್ರಿಕಾಗೋಷ್ಠಿ ಕರೆದಿರುವ ಅವರು ತಮ್ಮ ಸ್ಪರ್ಧೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ತಾವು ರಾಜಕೀಯ ಪ್ರವೇಶಿಸಲು ನಿರ್ಧರಿಸಿದ್ದು, ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿರುವುದಾಗಿ ಖುದ್ದು ಹುಚ್ಟ ವೆಂಕಟ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಆದರೆ, ಸ್ವತಂತ್ರವಾಗಿ ಸ್ಪರ್ಧಿಸುತ್ತಾರಾ ಅಥವಾ ಯಾವುದಾದರೊಂದು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಎಂಬುದು ಸ್ಪಷ್ಟವಾಗಿಲ್ಲ. ಬಹುತೇಕ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.
Comments