ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಇಂದು ಫೈನಲ್

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಜೋರಾಗಿಯೆ ನಡೆಯುತ್ತಿದೆ. ಇಂದು ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವ ಎಲ್ಲಾ ಸಾಧ್ಯತೆಗಳು ಕೂಡ ಇವೆ.
ಈ ಬಾರಿ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದು ಮತ್ತು 224 ಕ್ಷೇತ್ರಗಳ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡುವುದು ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ. ಆದ್ದರಿಂದ ಇಂದು ದೆಹಲಿಯಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ಕೂಡ ನಡೆಯಲಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ದೆಹಲಿಗೆ ಹೋಗಿದ್ದಾರೆ. ಮಧುಸೂದನ್ ಮಿಸ್ತ್ರಿ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿ ಕ್ಷೇತ್ರಗಳ, ಆಕಾಂಕ್ಷಿಗಳ ಹಾಗೂ ಕ್ಷೇತ್ರದಲ್ಲಿ ಪಕ್ಷದ ಸ್ಥಿತಿ ಗತಿ ಹಾಗೂ ಅಲ್ಲಿನ ರಾಜಕೀಯ ಲೆಕ್ಕಚಾರಗಳ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡು ಹೋಗಿದ್ದಾಗಿದೆ. ನಂತರ ಕೆಪಿಸಿಸಿ ಚುನಾವಣಾ ಸಮಿತಿ ಎರಡು ಬಾರಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಮಾಡಿದ್ದು, ಹಾಲಿ ಶಾಸಕರಲ್ಲಿ ಕೆಲವನ್ನು ಹೊರತು ಪಡಿಸಿ ಉಳಿದವರಿಗೆಲ್ಲ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ 155 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರು ಫೈನಲ್ ಕೂಡ ಮಾಡಿದ್ದಾರೆ. ಉಳಿದ ಕೆಲವಡೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಈ ಬಗ್ಗೆ ಇಂದಿನ ಸ್ಕ್ರೀನಿಂಗ್ ಕಮೀಟಿಯಲ್ಲಿ ಚರ್ಚೆ ನಡೆಯಲಿದೆ.ಯಾರಿಗೆ ಟಿಕೆಟ್ ಸಿಗುತ್ತೆ ಎನ್ನುವುದನ್ನು ಎಲ್ಲರೂ ಕೂಡ ಕಾದು ನೋಡಬೇಕಿದೆ.
Comments