ಚುನಾವಣ ರಂಗಕ್ಕೆ ಮತ್ತಷ್ಟು ಮೆರಗು-ನಾಳೆಯಿಂದ ನಾಮಪತ್ರ ಸಲ್ಲಿಕೆ

16 Apr 2018 12:46 PM | Politics
458 Report

ರಾಜ್ಯ ರಾಜಕೀಯದಲ್ಲಿ ಚುನಾವಣೆಗೆ ಮತ್ತಷ್ಟು ರಂಗು ಹೆಚ್ಚಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆಯು ನಾಳೆ ಹೊರಬೀಳಲಿದ್ದು , ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮೇ 12ರಂದು ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ನಾಳೆಯಿಂದ ಒಂದು ವಾರ ಕಾಲ ನಾಮಪತ್ರ ಸಲ್ಲಿಸಲು ಚುನಾವಣಾ ಆಯೋಗ ಅವಕಾಶವನ್ನು ನೀಡಿದೆ. ಚುನಾವಣಾ ಅಧಿಕಾರಿಗಳು ನಾಳೆ ಅಧಿಸೂಚನೆ ಹೊರಡಿಸಿದ ಬಳಿಕ ಸ್ಪರ್ಧಾಕಾಂಕ್ಷಿಗಳು ತಮ್ಮ ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ಏಪ್ರಿಲ್ 24ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದ್ದು , .25ರಂದು ನಾಮಪತ್ರಗಳ ಪರಿಶೀಲನೆಯು ಕೂಡ ನಡೆಯಲಿದೆ. .27ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಆನಂತರ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ನಡುವೆ ಮುಖಾಮುಖಿ ಪೈಪೋಟಿ ಏರ್ಪಡಲಿವೆ. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಮೊದಲ

Sponsored