ಘಟಾನುಘಟಿ ಪ್ರಭಾವಿ ನಾಯಕರಿಂದ ಇಂದು ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭೆ ಚುನಾವಣೆಯು ಮೇ 12 ರಂದು ನಡೆಯಲಿದ್ದು ನಾಮಪತ್ರ ಸಲ್ಲಿಕೆ ಕೆಲಸ ಈಗಾಗಲೇ ಪ್ರಾರಂಭವಾಗಿದ್ದು ಇಂದು ಕೆಲವು ಘಟಾನುಘಟಿಗಳು ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ಶಿಖಾರಿಪುರ ಕ್ಷೇತ್ರದಲ್ಲಿ ನಾಮಪತ್ರವನ್ನು ಇಂದು ಸಲ್ಲಿಸಲಿದ್ದಾರೆ. ಈ ವೇಳೆ ಕೇಂದ್ರ ನಾಯಕರು ಅವರಿಗೆ ಜೊತೆಯಾಗಲಿದ್ದಾರೆ..ಬಿಜೆಪಿಯ ಮತ್ತೊಬ್ಬ ನಾಯಕ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಇಂದು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ವೇಳೆ ಅವರಿಗೆ ಜಗದೀಶ್ ಶೆಟ್ಟರ್ ಜೊತೆಯಾಗಲಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುತ್ತಿರುವ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಪುತ್ರ, ಮಧು ಬಂಗಾರಪ್ಪ ಕೂಡಾ ಇವತ್ತೆ ನಾಮ ಪತ್ರ ಸಲ್ಲಿಸಲಿದ್ದಾರೆ. ಮಧು ಬಂಗಾರಪ್ಪಗೆ ಎದುರಾಳಿಯಾಗಿ ಈ ಬಾರಿ ಅವರ ಸಹೋದರ ಕುಮಾರ್ ಬಂಗಾರಪ್ಪ ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು ವಿಶೇಷ. ಸಹೋದರರ ಜುಗಲ್ಬಂದಿ ರಾಜಕೀಯದಲ್ಲಿ ವರ್ಕೌಟ್ ಆಗುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.
Comments