ಈ ಸಲ ಕಾಂಗ್ರೇಸ್ ಬರೋದು ನೂರಕ್ಕೆ ನೂರು ಸತ್ಯವಂತೆ..!
ವಿಧಾನ ಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೇರುವುದು ನೂರಕ್ಕೆ ನೂರು ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿಕೊಂಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳಲ್ಲಿ ಬಹುಪಾಲು ಭರವಸೆಗಳನ್ನು ಪೂರೈಸಿದ್ದೇವೆ. ಈ ಬಾರಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಿಎಂ ಹೇಳಿಕೊಂಡಿದ್ದಾರೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಕೂಡಾ ಇದೇ ಮಾತುಗಳನ್ನು ಹೆಳಿದ್ದಾರೆ, ಕೊಟ್ಟ ಭರವಸೆಗಳನ್ನು ಪೂರೈಸಿದ ಸರ್ಕಾರ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ. ಹಾಗಾಗಿ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ತಿಳಿಸಿದ್ದಾರೆ. ಆದರೂ ಕೂಡ ಬಾರಿ ಅಧಿಕಾರದ ಗದ್ದುಗೆ ಹಿಡಿಯೋರು ಯಾರು ಅನ್ನೋದನ್ನ ಕಾದು ನೋಡಬೇಕಿದೆ.
Comments