ಕೆಎಸ್ಆರ್ಟಿಸಿ ಬಸ್ ಟಿಕೆಟ್ನಲ್ಲಿ ಮತದಾನ ಜಾಗೃತಿ

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಮತದಾನದ ಜಾಗೃತಿಯನ್ನು ಮೂಡಿಸಲು ವಿಭಿನ್ನ ಪ್ರಯೋಗಗಳನ್ನು ಮಾಡುತ್ತಾರೆ.
ಆದರೆ ಈ ಬಾರಿ ರಾಜ್ಯದ ಜನತೆ ಹಾಗೂ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದು, ಟಿಕೆಟ್ ಮೇಲೆ ಕಡ್ಡಾಯವಾಗಿ ಮತದಾನ ಮಾಡಿ ಎಂಬ ಸಂದೇಶವನ್ನು ಮುದ್ರಿಸಿ ನೀಡುತ್ತಿದೆ.ಇಂದಿನಿಂದ ಕೆ.ಎಸ್.ಆರ್.ಟಿ.ಸಿಯ ಈ ಜಾಗೃತಿ ಅಭಿಯಾನ ಆರಂಭವಾಗಿದ್ದು, ಕೆಎಸ್ಆರ್ಟಿಸಿ ಬಸ್ಗಳಲ್ಲಿ ನೀಡಲಾಗುವ ಎಲ್ಲಾ ಟಿಕೆಟ್ಗಳ ಕೆಳಭಾಗದಲ್ಲಿ 'ದಿನಾಂಕ 12.05.2018ರಂದು ಮತದಾನ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ ಎಂಬ ಸಂದೇಶ ಪ್ರಕಟಿಸಲಾಗಿದೆ. ನಿಗಮದ ಈ ಕಾರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.
Comments