ವರುಣಾಕ್ಷೇತ್ರದಿಂದ ದೂರ ಉಳಿದ ವಿಜಯೇಂದ್ರ
ರಾಜ್ಯವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ನಾಮ ಪತ್ರ ಸಲ್ಲಿಸದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ.
ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ನಂಜನಗೂಡಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.ಬದಲಾದ ಪರಿಸ್ಥಿತಿಯಲ್ಲಿ ವಿಜಯೇಂದ್ರ ಬದಲು ಜಿ.ಪಂ. ಸದಸ್ಯ ಸದಾನಂದ ಅವರಿಗೆ ಬಿಜೆಪಿ ಪಕ್ಷದ ಟಿಕೆಟ್ ನೀಡಲಿದೆಯಂತೆ. ಈ ಮೊದಲು ಸಿಎಂ ಪುತ್ರ ಡಾ. ಯತೀಂದ್ರ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ಸ್ಪರ್ಧಾ ಕಣಕ್ಕೆ ಧುಮುಕಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರ ಎಲ್ಲರ ಗಮನ ಸೆಳೆದಿತ್ತು.ಇದೀಗ ಕೊನೆಯ ಕ್ಷಣದಲ್ಲಿ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾಗಿರುವ ಹಿನ್ನೆಲೆಯಲ್ಲಿ ಕೆಲವು ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಪಕ್ಷದಲ್ಲಿ ಯಾವ ಯಾವ ರೀತಿಯ ಬದಲಾವಣೆಗಳು ಆಗುತ್ತವೆ ಅನ್ನೊದನ್ನ ಕಾದು ನೋಡಬೇಕಿದೆ.
Comments