ಜೆಡಿಎಸ್ ನಿಂದ ಚುನಾವಣಾ ಅಖಾಡಕ್ಕಿಳಿಯಲಿರುವ ನಿರ್ಮಾಪಕ....!!



ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ರಂಗೇರುತ್ತಿದೆ. ಹಲವು ಚಿತ್ರ ನಟ-ನಟಿಯರು ಜೆಡಿಎಸ್ ನತ್ತ ಒಲವು ತೋರಿಸುತ್ತಿದ್ದಾರೆ. ಸಿನಿಮಾ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧ ಇದೆ. ಅದು ಈ ಬಾರಿಯ ಚುನಾವಣೆಯಲ್ಲಿಯೂ ಮುಂದುವರೆದಿದ್ದು, ಚುನಾವಣಾ ಕಣಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಒಬ್ಬೊಬ್ಬರಾಗಿ ಕಾಲಿಡುತ್ತಿದ್ದಾರೆ. ಸದ್ಯ ಕನ್ನಡದ ನಿರ್ಮಾಪಕ ಕೆ.ಮಂಜು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.
ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಕನ್ನಡ ಸಿನಿಮಾ ನಿರ್ಮಾಪಕ ಕೆ ಮಂಜು ಅವರು ಕಣಕ್ಕಿಳಿಯುವ ಸುದ್ದಿ ಬಂದಿದೆ. ಈ ಮುಂಚೆ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಇವರು ಈಗ ಜೆಡಿಎಸ್ ನಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಈಗ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡರನ್ನು ಭೇಟಿ ಮಾಡಿ, ಬಿ ಫಾರಂ ಪಡೆಯಲಿದ್ದು, ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯಿದೆ. ಬೊಮ್ಮನಹಳ್ಳಿ ಕ್ಷೇತ್ರದಿಂದ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರಸ್ವಾಮೀಜಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಕೆ ಮಂಜುಗೆ ಅದೃಷ್ಟ ಒಲಿದಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ನಿರ್ಮಾಪಕ ಕೆ.ಮಂಜು ಕನ್ನಡದಲ್ಲಿ ಅನೇಕ ಸಿನಿಮಾಗಳಿಗೆ ಬಂಡವಾಳ ಹಾಕಿದ್ದಾರೆ. 'ಅರಮನೆ', 'ಸಾಹುಕಾರ', 'ಸೂಪರ್ ರಂಗ', 'ರಾಜಾಹುಲಿ', 'ಸಂತು ಸ್ಟ್ರೈಟ್ ಫಾರ್ವಾರ್ಡ್' ಕೆ.ಮಂಜು ನಿರ್ಮಾಣದ ಪ್ರಮುಖ ಸಿನಿಮಾಗಳಾವಿವೆ.
Comments