ಅಂಬರೀಷ್ ಸ್ಪರ್ಧೆಯ ಗೊಂದಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ ಬೀಳಲಿದೆ..!
ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಡ್ಯ ವಿಧಾನಸಭೆ ಕ್ಷೇತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಷ್ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ವಿಚಾರ ಕೆಲವೇ ಕ್ಷಣಗಳಲ್ಲಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ..
'ಅಂಬರೀಷ್ ನಮ್ಮ ಮಂಡ್ಯ ಜಿಲ್ಲಾ ನಾಯಕರು. ಅವರ ಜೊತೆ ನಾನು ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ' ಎಂದು ಕೆಪಿಸಿಸಿ ಅಧ್ಯಕ್ಷರಾದ ಪರಮೇಶ್ವರ್ ಹೇಳಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿ ಫಾರಂ ಕೊಟ್ಟರೂ ಅಂಬರೀಷ್ ಸ್ಪರ್ಧೆಗೆ ಮೀನ ಮೇಷ ಎಣಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ನಾಯಕರು ಅವರ ಮನ ಒಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೇಳಿಕೆಯನ್ನು ಕೂಡ ನೀಡಿದ್ದು, ಅವರ ಸ್ಪರ್ಧೆಯ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
Comments