ಕಾಂಗ್ರೆಸ್ ನಿಂದ ಇಂದು ಮತ್ತೊಂದು ಪ್ರಣಾಳಿಕೆ ಬಿಡುಗಡೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೆನ್ನೆ ಒಂದು ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿತ್ತು., ಕಾಂಗ್ರೆಸ್ ಪಕ್ಷ ಇಂದು ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದೆ.
ಬೆಂಗಳೂರಿಗೆ ಪ್ರತ್ಯೇಕ ಮ್ಯಾನಿಫೆಸ್ಟೋ ತಯಾರಿ ಮಾಡಿರುವ ಕಾಂಗ್ರೆಸ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆಗಾರರಾಗಿದ್ದ ಸ್ಯಾಂ ಪಿತ್ರೋಡಾರಿಂದ ಬೆಂಗಳೂರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿಸಲಿದ್ದಾರೆ.ಪ್ರಣಾಳಿಕೆಯ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ಜ್ಞಾನ ಜ್ಯೋತಿ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದ್ದು ಇದೇ ಮೊದಲ ಬಾರಿಗೆ ಪ್ರಾದೇಶಿಕವಾರು ಪ್ರಣಾಳಿಕೆ ರಚಿಸಿರುವ ಕೆಪಿಸಿಸಿ ನಿನ್ನೆಯಷ್ಟೇ ಮೊದಲ ಪ್ರಣಾಳಿಕೆ ಬಿಡುಗಡೆ ಮಾಡಿದೆ.
Comments