ನಟ ಜಗ್ಗೇಶ್ ಗೆ ಬಿಗ್ ಶಾಕ್ – ಜಗ್ಗೇಶ್ ಚಿತ್ರಗಳಿಗೂ, ರಿಯಾಲಿಟಿ ಶೋಗಳಿಗೆ ಬಿತ್ತು ಬ್ರೇಕ್..!

ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ನಗರದ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ನಟ ಜಗ್ಗೇಶ್ ಅವರು ನಟಿಸಿರುವ ರಿಯಾಲಿಟಿ ಶೋ, ಸಿನಿಮಾಗಳನ್ನು ಪ್ರಸಾರ ಮಾಡದಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಯಶವಂತಪುರ ಕ್ಷೇತ್ರದಲ್ಲಿ ಜಗ್ಗೇಶ್ ಪ್ರತಿ ಸ್ಪರ್ಧಿಯಾಗಿರುವ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿರುವ ಎಸ್ ಟಿ ಸೋಮಶೇಖರ್ ಅವರು ಚುನಾವಣಾ ಅಧಿಕಾರಿಗಳಿಗೆ ದೂರನ್ನು ಸಲ್ಲಿಸಿದ್ದಾರೆ.
ಇದೇ ವೇಳೆ ಅವರು ನೀಡಿರುವ ದೂರಿನಲ್ಲಿ ಜಗ್ಗೇಶ್ ಅಭಿನಯ ಮಾಡಿರುವ ಚಿತ್ರಗಳು ಹಾಗೂ ಅವರ ರಿಯಾಲಿಟಿ ಶೋ ಗಳು ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂದು ಕೂಡ ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಎಸ್ ಟಿ ಸೋಮಶೇಖರ್ ಅವರು ಜಗ್ಗೇಶ್ ಅವರು ನಡೆಸಿಕೊಡುವ ರಿಯಾಲಿಟಿ ಶೋ ಗಳು ದೂರದರ್ಶನ, ಖಾಸಗಿ ವಾಹನಿ, ಸ್ಥಳೀಯ ಕೇಬಲ್ ನೆಟ್‍ವರ್ಕ್ ಮತ್ತು ಇತರೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಜಗ್ಗೇಶ್ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತಿರುವ ಹಿನ್ನಲೆಯಲ್ಲಿ ಅವರ ಅಭಿನಯದ ಅಂಶಗಳು ಚುನಾವಣೆ ನೀತಿ ಸಂಹಿತೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಇಂತಹ ಕಾರ್ಯಕ್ರಮಗಳು ಪ್ರಸಾರ ಆಗುವುದರಿಂದ ಮತದಾರರ ಮೇಲೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಸಾಧ್ಯತೆ ಇದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವರೆಗೂ ಜಗ್ಗೇಶ್ ಅವರ ಕಾರ್ಯಕ್ರಮಗಳು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ಎಂದು ಮನವಿಯನ್ನು ಮಾಡಿದ್ದಾರೆ. ಇಷ್ಟೆಲ್ಲಾ ಪ್ರಯತ್ನಗಳು ನಡೆದರೂ ಕೂಡ ಗೆಲುವು ಯಾರ ಪಾಲಿಗೆ ಅನ್ನೋದನ್ನ ಕಾದು ನೋಡಬೇಕಿದೆ.
Comments