ಸರಳ, ಸಜ್ಜನ ರಾಜಕಾರಣಿ ಶಾಸಕ ವಿಜಯ್ ಕುಮಾರ್ ಇನ್ನಿಲ್ಲ .!

ಜಯನಗರ ಬಿಜೆಪಿ ಶಾಸಕರಾದ ವಿಜಯ್ ಕುಮಾರ್ (60) ಗುರುವಾರ ರಾತ್ರಿ ಬಾರದ ಲೋಕಕ್ಕೆ ತ್ಯಜಿಸಿದ್ದಾರೆ. ಜಯನಗರ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದ ವಿಜಯ್ ಕುಮಾರ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತಂದಾಗಲೇ ಅವರ ಹೃದಯ ಬಡಿತ, ರಕ್ತದ ಒತ್ತಡ ಕುಸಿದಿತ್ತು. ಚಿಕಿತ್ಸೆ ಫಲಕಾರಿ ಆಗದೇ ರಾತ್ರಿ 1 ಗಂಟೆಗೆ ವಿಜಯ್ ಕುಮಾರ್ ಮರಳಿ ಬಾರದ ಲೋಕಕ್ಕೆ ಹೊಗಿದ್ದಾರೆ.
ತುಂಬಾ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು, ಈ ಬಾರಿಯೂ ಕೂಡ ಕಣದಲ್ಲಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಬಾರಿ ಸೋಲು, ಎರಡು ಬಾರಿ ಗೆಲುವು ಕಂಡಿದ್ದ ವಿಜಯ್ ಕುಮಾರ್, ಐದನೇ ಬಾರಿ ಚುನಾವಣೆ ಎದುರಿಸಲು ಸಿದ್ದರಾಗಿದ್ದರು. ಕಳೆದ ತಿಂಗಳಷ್ಟೇ ಅವರಿಗೆ ಹೃದಯದಲ್ಲಿ ಸ್ಟಂಟ್ ಅಳವಡಿಸಲಾಗಿತ್ತು. ವಿಜಯ್ ಕುಮಾರ್ ಗೆ ವೈದ್ಯರು 2 ಕಿಲೋ ಮೀಟರ್ ಗಿಂತ ಹೆಚ್ಚು ನಡೆಯಬಾರದು ಎಂದು ಎಚ್ಚರಿಕೆಯನ್ನು ನೀಡಿದ್ದರೂ ಸಹ ಚುನಾವಣೆ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದರು. ಬಿಜೆಪಿ ಶಾಸಕ ವಿಜಯ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆ ಆಗುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ್ದಾರೆ. ಜಯನಗರ ಕ್ಷೇತ್ರದ ತಮ್ಮ ಅಭ್ಯರ್ಥಿ ವಿಧಿವಶರಾಗಿದ್ದು, ಬೇರೆ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲು ಸಮಯಾವಕಾಶ ಇಲ್ಲದ ಕಾರಣ ಈ ಕ್ಷೇತ್ರ ಚುನಾವಣೆಯನ್ನು ಮುಂದೂಡುವಂತೆ ಮನವಿಯನ್ನು ಮಾಡಲಿದ್ದಾರೆ. ಇನ್ನೂ ವಿಜಯಕುಮಾರ್ ಅವರ ಅಂತಿಮ ದರ್ಶನಕ್ಕೆ ಅನೇಕ ಗಣ್ಯಾತಿಗಣ್ಯರು ಆಗಮಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.
Comments