ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಪ್ರಚಾರ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್..!

ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಸ್ಟಾರ್ ಗಳು ಪಕ್ಷಗಳ ಚುನಾವಣಾ ಪ್ರಚಾರವನ್ನು ಕೈಗೊಂಡಿದ್ದಾರೆ. ಚುನಾವನೆ ಸಮೀಪಿಸುತ್ತಿದ್ದಂತೆ ಪ್ರಚಾರ ಮತ್ತಷ್ಟು ರಂಗೇರುತ್ತಿದೆ. ಇದರ ಜೊತೆಗೆ ಸಿನಿಮಾ ನಟರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ರಾಕಿಂಗ್ ಸ್ಟಾರ್ ಯಶ್, ಕಿಚ್ಚ ಸುದೀಪ್ ಅವರು ಪ್ರಚಾರದಲ್ಲಿ ಈಗಾಗಲೇ ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರದಿ. ದರ್ಶನ್ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿಯಲಿದ್ದಾರೆ. ದರ್ಶನ್ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಕ್ಷೇತ್ರದ 30 ಹಳ್ಳಿಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆಯನ್ನು ಮಾಡಲಿದ್ದಾರೆ. ಸ್ಟಾರ್ ಗಳನ್ನು ಮುಂದಿಟ್ಟುಕೊಂಡು ಗೆಲ್ಲಬಹುದು ಎಂದು ನಂಬಿರುವ ರಾಜಕೀಯ ಪಕ್ಷಗಳಿಗೆ ಇನ್ನೂ ಸ್ವಲ್ಪ ದಿನಗಳಲ್ಲೆ ಉತ್ತರ ಸಿಗಲಿದೆ.
Comments