ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲಕ್ಷ ಲಕ್ಷ ರೂ ಅಕ್ರಮ ನಗದು ಪತ್ತೆ..!
ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾಕಷ್ಟು ಕಡೆ ಅಕ್ರಮ ಹಣವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅದೇ ರೀತಿಯಾಗಿ ಚಾಮುಂಡೇಶ್ವರಿ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಕೂಡ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನದಲ್ಲಿ ದಾಖಲೆ ಇಲ್ಲದೆ ಹಣವನ್ನು ಸಾಗಣೆಗೆ ಸಂಬಂಧಿಸಿದಂತೆ ಒಟ್ಟು 5.42 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು-ಹುಣಸೂರು ರಸ್ತೆಯಲ್ಲಿರುವ ಮೈದನಹಳ್ಳಿಯಲ್ಲಿ ಚುನಾವಣಾ ತಪಾಸಣಾ ಸಿಬ್ಬಂದಿ ವಾಹನ ತಪಾಸಣೆ ಮಾಡಿದ ಸಂದರ್ಭ ವಾಹನಗಳಲ್ಲಿ ಸೂಕ್ತ ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 3.06 ಲಕ್ಷ ರೂ. ಹಾಗೂ 2.36 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
Comments