ಅಕ್ರಮ ವೋಟರ್ ಐಡಿ ಪತ್ತೆ ಹಿನ್ನಲೆ- ಆರ್ ಆರ್ ನಗರ ಮತದಾನ ಮುಂದೂಡುವ ಸಾಧ್ಯತೆ!
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಎಲ್ಲರೂ ಕೂಡ ಮತದಾನ ಮಾಡಬೇಕು ಎಂದು ಗುರುತಿನ ಚೀಟಿ ಪಡೆಯುವುದಕ್ಕಾಗಿ ಸಾಕಷ್ಟು ಸಮಯವನ್ನು ಚುನಾವಣಾ ಆಯೋಗವು ನೀಡಿತ್ತು. ಆದರೆ ಕೆಲವರು ಇದ್ಯಾವುದಕ್ಕೆ ತಲೆ ಕೆಡಸಿಕೊಳ್ಳದೆ ಸುಮ್ಮನಿದ್ದರು. ಇದೀಗ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 9 ಸಾವಿರಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಅಕ್ರಮವಾಗಿ ಪತ್ತೆಯಾಗಿವೆ.
ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತದಾನವನ್ನು ಮುಂದೂಡುವ ಸಾಧ್ಯತೆಗಳಿವೆ. ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ 9 ಸಾವಿರಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳು ಅಕ್ರಮವಾಗಿ ಪತ್ತೆಯಾಗಿವೆ. ಹೀಗಾಗಿ ಮತದಾನ ಮುಂದೂಡುವಂತೆ ಬಿಜೆಪಿ ಮತ್ತು ಜೆಡಿಎಸ್ ಪಟ್ಟು ಹಿಡಿದಿವೆ. ಚುನಾವಣಾ ಆಯೋಗ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದು, ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಮಂಗಳವಾರ ಜಾಲಹಳ್ಳಿಯ ಅಪಾರ್ಟ್ ಮೆಮಟ್ ವೊಂದರಲ್ಲಿ ಐದು ಲ್ಯಾಪ್ ಟಾಪ್, ಒಂದು ಪ್ರಿಂಟರ್, ಎರಡು ಟ್ರಂಕ್ ತುಂಬಾ ಮತದಾರರ ಗುರುತಿನ ಚೀಟಿ ಸಿಕ್ಕಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿಯಾದ ಸಂಜೀವ್ ಕುಮಾರ್ ತಡರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಮುಂದುವರೆಸಿದ್ದಾರೆ.
Comments