ಚುನಾವಣಾ ಪ್ರಚಾರಕ್ಕೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಸಿನಿಮಾ ಸ್ಟಾರ್ ಗಳನ್ನು ಬಳಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತೆ ಇದೆ. ಯಶ್, ದರ್ಶನ್, ಸುದೀಪ್ , ಹೀಗೆ ಸಾಕಷ್ಟು ನಟರು ತಮಗೆ ಇಷ್ಟವಾದ ಪಕ್ಷಗಳ ಬಗ್ಗೆ ಪ್ರಚಾರ ಮಾಡುತ್ತಿದ್ದರು. ಆದರೆ ಇದೀಗ ಕಿಚ್ಚ ಸುದೀಪ್ ಚುನಾವಣಾ ಪ್ರಚಾರಕ್ಕೆ ಗುಡ್ ಬೈ ಹೇಳಿದ್ದಾರೆ.
ಮೇ 12 ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಪರವಾಗಿ ಬಾದಾಮಿ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಹೊರಟಿದ್ದ ನಟ ಸುದೀಪ್ ಇನ್ನು ಮುಂದೆ ಪ್ರಚಾರ ಮಾಡುವ ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಕಾರಣ ಸ್ನೇಹಿತರು, ಅಭಿಮಾನಿಗಳಂತೆ. ಟ್ವಿಟರ್ ನಲ್ಲಿ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ಸುದೀಪ್, ರಾಜಕೀಯ ಪಕ್ಷಕ್ಕೆ ಸೀಮಿತವಾಗಬೇಡಿ ಎಂದು ಅಭಿಮಾನಿಗಳು, ಸ್ನೇಹಿತರು ಒತ್ತಾಯಿಸಿರುವುದಕ್ಕೆ ಚುನಾವಣಾ ಪ್ರಚಾರಕ್ಕೆ ಹೋಗದೇ ಇರಲು ನಿರ್ಧರಿಸಿದ್ದೇನೆ ಎಂದು ಸುದೀಪ್ ಹೇಳಿದ್ದಾರೆ.
Comments