ಸಿವಿಕ್ ನ್ಯೂಸ್ ಸಮೀಕ್ಷೆ- ಈ ಬಾರಿ ಸಮ್ಮಿಶ್ರ ಸರ್ಕಾರ, ಜೆಡಿಎಸ್ ಯೇ ಕಿಂಗ್..!?

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯು ಹೈ ವೋಲ್ಟೇಜ್ ಕ್ರಿಯೆಟ್ ಮಾಡುತ್ತಿದೆ. ಹಾಗಾಗಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳ ಪರವಾಗಿ ಸಾಕಷ್ಟು ಸಮೀಕ್ಷೆಗಳನ್ನು ನಡೆಸುತ್ತಿದ್ದಾರೆ. ಒಂದೊಂದು ಸಮೀಕ್ಷೆಯಲ್ಲಿ ಒಂದೊಂದು ರೀತಿಯ ಫಲಿತಾಂಶಗಳು ಹೊರಬೀಳುತ್ತಿವೆ. ಅದೇ ರೀತಿಯಾಗಿ ಸಿವಿಕ್ ನ್ಯೂಸ್ ಸಮೀಕ್ಷೆಯು ಕೂಡ ಈ ಕೆಳಕಂಡಂತಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕಾಗಿ ಸಿವಿಕ್ ನ್ಯೂಸ್ ಜನಾಭಿಪ್ರಾಯವನ್ನು ಸಂಗ್ರಹಿಸಿದ್ದು, ಸಮೀಕ್ಷೆ ಪ್ರಕಾರ ಕಾಂಗ್ರೆಸ್ 82-87 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ 75-84 ಹಾಗೂ ಜೆಡಿಎಸ್‌ಗೆ 50-59 ಸ್ಥಾನ ಸಿಕ್ಕಿದೆ. ಈ ಬಾರಿ ಜನರ ಒಲವು ಬಿಜೆಪಿ ಮತ್ತು ಜೆಡಿಎಸ್ ಪರ ಹೆಚ್ಚಾಗಿ ಕಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರ ರಚಿಸುವ ಬಗ್ಗೆ ದಟ್ಟವಾದ ಅಭಿಪ್ರಾಯ ಸಂಗ್ರಹವಾಗಿದೆ. ಸುಮಾರು ನೂರರಲ್ಲಿ 60%-70% ಜನರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
Comments