ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ: ಬೆಳಗ್ಗೆ 9:15ರ ಹೊತ್ತಿಗೆ ಶೇ 10.51ರಷ್ಟು ಮತದಾನ ಪ್ರಕ್ರಿಯೆ

ಕರ್ನಾಟಕ ರಾಜ್ಯ ವಿಧಾನಸಭೆಯ ಹಿನ್ನಲೆಯಲ್ಲಿ 222 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆಯು ಶನಿವಾರ ಬೆಳಗ್ಗೆ ಆರಂಭಗೊಂಡಿದೆ. ಶನಿವಾರ ಬೆಳಗ್ಗೆ 9:15ರ ಹೊತ್ತಿಗೆ ಶೇ 10:51ರಷ್ಟು ಮತದಾನವಾಗಿದೆ.
ರಾಜ್ಯದಲ್ಲಿ ಒಟ್ಟು 5.06 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಒಟ್ಟು 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಲ್ಲಿ ಮತದಾನವು ನಡೆಯುತ್ತಿದೆ. ಆರ್ ಆರ್ ನಗರದ ಕ್ಷೇತ್ರದ ಮತದಾನ ಇದೇ ತಿಂಗಳ 28ಕ್ಕೆ ನಡೆಯಲಿದೆ, ಜಯನಗರ ಕ್ಷೇತ್ರದಲ್ಲಿ ಅಭ್ಯರ್ಥಿ ಸಾವಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೊಳೆನರಸೀಪುರ ಕ್ಷೇತ್ರದ ಪಡುವಲಹಿಪ್ಪೆ ಗ್ರಾಮದಲ್ಲಿ ತನ್ನ ಪತ್ನಿ ಚನ್ನಮ್ಮ ಹಾಗೂ ಪುತ್ರ ರೇವಣ್ಣ ಕುಟುಂಬದೊಂದಿಗೆ ಮತಗಟ್ಟೆಗೆ ಬಂದು ಮತದಾನವನ್ನು ಮಾಡಿದ್ದಾರೆ.
Comments