ರಾಜ್ಯದ 222 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಕ್ಷಣಗಣನೆ..!

ರಾಜ್ಯದ ವಿಧಾನಸಭಾ ಚುನಾವಣೆಗೆ ಕಳೆದ ಶನಿವಾರವಷ್ಟೆ ತೆರೆಬಿದ್ದಿದೆ. ರಾಜ್ಯದ 222 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ, ಈಗಾಗಲೇ ಪ್ರತಿ ಜಿಲ್ಲೆಯಲ್ಲೂ ಕೂಡ ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ ಅಂತ ಚುನಾವಣಾ ಮುಖ್ಯ ಅಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದರು. ರಾಜ್ಯದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯದ ಸಿದ್ದತೆಯು ಮುಗಿದಿದ್ದು, ಪ್ರತಿಯೊಂದು ಜಿಲ್ಲೆಯಲ್ಲೂ ಮತ ಎಣಿಕೆ ಕೇಂದ್ರವನ್ನು ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಇದೇ ವೇಳೆ ಚುನಾವಣಾ ಮುಖ್ಯ ಅಧಿಕಾರಿ ಸಂಜೀವ್ ಕುಮಾರ್ ಮಾತನಾಡಿ ಚಿತ್ರದುರ್ಗ -2, ದಕ್ಷಿಣ ಕನ್ನಡ - 2, ಮೈಸೂರು - 2, ತುಮಕೂರಿನಲ್ಲಿ -3ಕಡೆ ಮತ್ತು ಬೆಂಗಳೂರಲ್ಲಿ ನಾಲ್ಕು ಕಡೆ ಮತ ಎಣಿಕೆಯು ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ 11,160 ಸಿಬ್ಬಂದಿಗಳ ನಿಯೋಜನೆಯನ್ನು ಮಾಡಲಾಗಿದೆ. ರಾಜ್ಯದಲ್ಲಿ ಶನಿವಾರ ನಡೆದ ಮತದಾನದಲ್ಲಿ ಶೇ 72.13 ರಷ್ಟು ದಾಖಲೆಯ ಮತದಾನವಾಗಿದ್ದು, ಹೊಸಕೋಟೆಯಲ್ಲಿ ಅತಿ ಹೆಚ್ಚು ಅಂದರೆ ಶೇ.89 ರಷ್ಟು ಮತದಾನವಾಗಿದೆ ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ ಎಂಬ ಮಾಹಿತಿಯನ್ನು ನೀಡಿದರು.
Comments