ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ 2018: ಸಿಎಂ ತವರಿನಲ್ಲೇ ಸಿದ್ದರಾಮಯ್ಯಗೆ ಆರಂಭಿಕ ಹಿನ್ನಡೆ..!

ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕರ್ನಾಟಕ ವಿಧಾನ ಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಚಾಮುಂಡೇಶ್ವರಿಯಲ್ಲಿ ಆರಂಭಿಕ ಹಿನ್ನಡೆ ಉಂಟಾಗಿದೆ.
ಜೆಡಿಎಸ್ ಅಭ್ಯರ್ಥಿಯಾದ ಜಿಟಿ ದೇವೇಗೌಡ ಅವರು ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದು, ಆರಂಭದಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಬರೊಬ್ಬರಿ 6904 ಮತಗಳನ್ನು ಪಡೆದು ಮುನ್ನಡೆಯನ್ನು ಸಾಧಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ 3425 ಮತವನ್ನು ಪಡೆದಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸೋಲುವ ಭೀತಿಯಿಂದಾಗಿಯೇ ಅವರು ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಚಾಮುಂಡೇಶ್ವರಿಯ ಸೋಲು ಅದಕ್ಕೆ ಪುಷ್ಟಿ ನೀಡುವಂತಿದೆ. ಚಾಮುಂಡೇಶ್ವರಿಯಲ್ಲಿ ಹಿನ್ನಡೆಯಾದರೂ ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಇಲ್ಲಿಯೂ ಕೂಡ ಹಿನ್ನಡೆಯಾಗಿದೆ. ಇನ್ನೂ ಕಂಪ್ಲೀಟ್ ರಿಸ್ಟಲ್ ನೋಡಿದ ಮೇಲೆ ಈ ಬಾರಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಅನ್ನೋದು ತಿಳಿಯುತ್ತದೆ.
Comments