ಬ್ರೇಕಿಂಗ್ ನ್ಯೂಸ್ : ಸಿ.ಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿರುವ ಸಿದ್ದರಾಮಯ್ಯ..!

ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಕುತೂಹಲಕ್ಕೆ ಇಂದು ತೆರೆ ಬೀಳುತ್ತಿದೆ. ಇದೇ ನಿಟ್ಟಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನ್ನು ಕಂಡಿರುವ ಸಿದ್ದರಾಮಯ್ಯ ಸಿ.ಎಂ ರಾಜೀನಾಮೆ ನೀಡುತ್ತಾರೆ ಎನ್ನಲಾಗುತ್ತಿದೆ.
2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನ್ನು ಅನುಭವಿಸಿರುವಂತಹ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರವನ್ನು ನಡೆಸುವಂತಹ ಕನಸು ಭಗ್ನವಾಗ ತೊಡಗಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Comments