ಗುಟ್ಟು ರಟ್ಟು ಮಾಡದ ಯಡಿಯೂರಪ್ಪನ ಮುಂದಿನ ನಡೆಯೇನು?
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಂದ ನಂತರ ಮಾಜಿ ಸಿಎಂ ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ ರಾಜ್ಯದ ಎಲ್ಲಾ ಜನತೆಗೆ ಧನ್ಯವಾದ ತಿಳಿಸಿದರು.
ಕಾಂಗ್ರೆಸ್ ದುರಾಡಳಿತವನ್ನು ಜನರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಮುಕ್ತ ಅಧಿಕಾರಕ್ಕೆ ಜನರು ಆದೇಶವನ್ನು ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯರಿಗೆ ಜನತೆ ಸರಿಯಾಗಿಯೇ ಬುದ್ಧಿ ಕಲಿಸಿದ್ದಾರೆ. ಮತದಾನದ ಮೂಲಕ ಅವರ ವಿರುದ್ಧ ನಾವಿದ್ದೇವೆ ಎಂಬುದನ್ನು ಹೇಳಿದ್ದಾರೆಂದು ಯಡಿಯೂರಪ್ಪ ತಿಳಿಸಿದ್ದಾರೆ. ಸಿದ್ಧರಾಮಯ್ಯರಿಗೆ ತವರಿನಲ್ಲಿಯೇ ಭಾರಿ ಮುಖಭಂಗವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಸೋತಿದ್ದಾರೆ. ಚುನಾವಣೆಯಲ್ಲಿ ಸೋಲುಂಡರೂ ಕಾಂಗ್ರೆಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಈ ನಡೆಯನ್ನು ಖಂಡಿಸುತ್ತೇನೆಂದು ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಎಲ್ಲಿಯೂ ಯಾವುದೇ ಹೇಳಿಕೆ ನೀಡದ ಯಡಿಯೂರಪ್ಪ ರಾಷ್ಟ್ರೀಯ ನಾಯಕರುಗಳ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
Comments