ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಬೆನ್ನಲ್ಲೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕೆ.ಎಸ್.ಈಶ್ವರಪ್ಪ ..!!
ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು ,ಯಾವ ಪಕ್ಷಕ್ಕೂ ಬಹುಮತ ಸಿಗದ ಬೆನ್ನಲ್ಲೇ ಇದೀಗ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಕಸರತ್ತು ನಡೆಸುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕೆಲ ಶಾಸಕರು ನಮಗೆ ಬೆಂಬಲ ನೀಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಡಿ.ಸಿ.ಎಂ ಕೆ.ಎಸ್.ಈಶ್ವರಪ್ಪ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಯನ್ನು ಸಂಪರ್ಕಿಸುತ್ತಿದ್ದಾರೆ. ಆ ಶಾಸಕರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಬೇಕಿಲ್ಲವಂತೆ. ಅಸಮಾಧಾನಿತ ಶಾಸಕರು ನಮ್ಮೊಂದಿಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ. ಯಾರು ಎಷ್ಟು ಅಂತಾ ಈಗ ಹೇಳಲ್ಲ ಎಂದ ಈಶ್ವರಪ್ಪ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿಯೇ ತೀರಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತಂತ್ರ ವಿಧಾನಸಭೆ ನಿರ್ಮಾಣ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಸೇರಿಕೊಂಡು ಸರ್ಕಾರ ರಚನೆಗೆ ಮುಂದಾಗಿದೆ. ಇದರ ಬೆನ್ನಲ್ಲೇ ಬಿಜೆಪಿಯವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಬುಟ್ಟಿಗೆ ಕೈ ಹಾಕಿದ್ದಾರೆ. ಕೆಲವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ಅಫರ್ ಮಾಡುತ್ತಿದೆ ಎಂದು ಕೇಳಿಬಂದಿದೆ.
Comments