ಬಿಎಸ್ ವೈ ಪ್ರಮಾಣ ವಚನ ಸ್ವೀಕಾರಕ್ಕೆ ರುಜು ಹಾಕಿದ ರಾಜ್ಯಪಾಲರು?
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, ತಮಗೆ ಸರ್ಕಾರ ರಚನೆ ಮಾಡಿಕೊಡಬೇಕು ಅಂತ ಬಿಜೆಪಿಯ ಮುಖಂಡರು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು.
ಇದೇ ವೇಳೆ ಬಿಜೆಪಿ ಮನವಿಗೆ ಒಪ್ಪಿಗೆ ಸೂಚನೆ ನೀಡಿರುವ ರಾಜ್ಯಪಾಲರು ಬಿಜೆಪಿ ಶಾಸಕಾಂಗದ ನಾಯಕ ಬಿ.ಎಸ್ ವೈ ಗೆ ನಾಳೆ ಪ್ರಮಾಣ ವಚನಕ್ಕೆ ರಾಜ್ಯಪಾಲರು ರುಜು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬಿಎಸ್ ವೈ ಅವರ ಪ್ರಮಾಣವಚನ ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸ್ವೀಕಾರ ಮಾಡಲು ಸಿದ್ದರಾಗಿದ್ದಾರೆ ಎನ್ನಲಾಗಿದೆ. ಇದೇ ಸಮಯದಲ್ಲಿ ಬಿಜೆಪಿಗೆ ಮೇ 27ರೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Comments