ಪ್ರಮಾಣ ವಚನ ಸ್ವೀಕರಿಸುವ ಮುನ್ನ ದೇವರ ದರ್ಶನ ಪಡೆದ ಯಡಿಯೂರಪ್ಪ

ರಾಜ್ಯ ವಿಧಾನ ಸಭಾ ಚುನಾವಣೆಯ ಫಲರತಾಂಶದ ಹಿನ್ನಲೆಯಲ್ಲಿ 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇಂದೂ ಬೆಳಗ್ಗೆ 8 ಗಂಟೆ ಸುಮಾರಿಗೆ ಬಿ.ಎಸ್.ಯಡಿಯೂರಪ್ಪ ಅವರು ಸಂಜಯ್ ನಗರದಲ್ಲಿರುವ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಆ ನಂತರ ರಾಜಭವನಕ್ಕೆ ತೆರಳಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದೇ ಸಮಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಕುಟುಂಬದವರು ಕೂಡ ಸಾಥ್ ನೀಡಿದರು.
Comments