3ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಬಿ ಎಸ್ ವೈ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಡೆನೀಡಬೇಕೆಂಬ ಕಾಂಗ್ರೆಸ್, ಜೆಡಿಎಸ್ ಮನವಿಯನ್ನು ನಸುಕಿನ ಜಾವ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠವು ನಕಾರವನ್ನು ವ್ಯಕ್ತಪಡಿಸಿದ್ದು, ಬಿಎಸ್ ಯಡಿಯೂರಪ್ಪ ನಿಗದಿಯಂತೆ ಗುರುವಾರ ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮತ್ತು ಮೂರನೇ ಬಾರಿಗೆ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.
ರಾಜ್ಯಪಾಲರಾದ ವಜೂಭಾಯ್ ವಾಲಾ ಬಿಎಸ್ ಯಡಿಯೂರಪ್ಪನವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಬಿಎಸ್ ವೈ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಿಥುನಲಗ್ನದಲ್ಲಿ ಹಸಿರು ಶಾಲನ್ನು ಹೊದ್ದು, ಬಿಳಿ ಬಣ್ಣದ ಸಫಾರಿ ಡ್ರೆಸ್ ನಲ್ಲಿ ಆಗಮಿಸಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
Comments