ಒಂದು ಕಡೆ ಪ್ರಮಾಣವಚನ ಸ್ವೀಕಾರ..! ಮತ್ತೊಂದು ಕಡೆ ಪ್ರತಿಭಟನೆ..!
ಇಂದು ಬೆಳಿಗ್ಗೆ ಯಡಿಯೂರಪ್ಪನವರು ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿದೆ. ಕಾಂಗ್ರೆಸ್ ಸರ್ಕಾರ ರಚನೆಗೆ ಅವಕಾಶ ನೀಡಿಲ್ಲ ಎಂದು ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ.
ವಿಕಾಸಸೌಧ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ಗುಲಾಬಬಿ ಆಜಾದ್, ಜಿ.ಪರಮೇಶ್ವರ ಮುಂತಾದ ನಾಯಕರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸರ್ಕಾರ ರಚನೆ ವಿವಾದ ನ್ಯಾಯಾಲಯದ ಅಂಗಳದಲ್ಲಿದೆ. ನಾವು ಜನರ ಮುಂದೆ ಹೋಗುತ್ತೇವೆ. ಬಿಜೆಪಿ ಕಾನೂನಿಗೆ ವಿರುದ್ಧವಾಗಿ ಹೋಗುತ್ತಿದೆ' ಎಂದು ಆರೋಪವನ್ನು ವ್ಯಕ್ತ ಪಡಿಸಿದ್ದಾರೆ.
Comments