ಬಿಗ್ ಬ್ರೇಕಿಂಗ್ : 'ಕಮಲ' ಪಾಳಯಕ್ಕೆ ಬಿಗ್ ಶಾಕ್ ಕೊಟ್ಟ ಮಾಜಿ ಸಚಿವ ಡಿ.ಕೆ.ಶಿವಕುಮಾರ್





ಇಂದು ಬೆಳಗ್ಗೆ ರಾಜಭವನದಲ್ಲಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವ ಸಂದರ್ಭಕ್ಕೆ ಸರಿಯಾಗಿ ಕಾಂಗ್ರೆಸ್‍ನ ನಾಯಕರು ವಿಧಾನಸೌಧ ಮತ್ತು ವಿಕಾಸಸೌಧದ ನಡುವಿರುವ ಗಾಂಧಿ ಪ್ರತಿಮೆ ಬಳಿಗೆ ಆಗಮಿಸಿದರು. ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲವಕಾಶ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಈ ನಡುವೆ ಪ್ರತಿಪಕ್ಷಗಳ ಶಾಸಕರನ್ನು ಅಪಹರಿಸಬಹುದು. ಬ್ಲಾಕ್‍ಮೇಲ್ ಮಾಡಬಹುದು, ಅಧಿಕಾರದ ಆಮಿಷ ಒಡ್ಡಬಹುದು. ಈ ಎಲ್ಲಾ ಸಾಧ್ಯತೆಗಳಿಗೆ ರಾಜ್ಯಪಾಲರು ಅವಕಾಶ ಮಾಡಿಕೊಟ್ಟಿದ್ದಾರೆ. ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ನಮ್ಮ ಶಾಸಕರನ್ನು ಮುಟ್ಟಲಿ ನಾವು ನೋಡುತ್ತೇವೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು. ರಾಜ್ಯಪಾಲರ ಕ್ರಮ ಬಿಜೆಪಿ ಬಹುಮತ ಸಾಬೀತುಪಡಿಸಲು ಸಾಧ್ಯವೇ ಇಲ್ಲ. ರಾಜಕಾರಣ ನಮಗೂ ಗೊತ್ತಿದೆ. ನಮ್ಮ ಶಾಸಕರನ್ನು ಮುಟ್ಟಿದರೆ ನಾವು ತಕ್ಕ ಪ್ರತ್ಯುತ್ತರ ಕೊಡಬೇಕಾಗುತ್ತದೆ ಎಂದು ಅವರದ್ದೇ ಶೈಲಿಯಲ್ಲಿ ಹೇಳಿದರು. ಹಲವು ಕಾಂಗ್ರೆಸ್ ಶಾಸಕರು ಜನಾರ್ಧನರೆಡ್ಡಿ, ಶ್ರೀರಾಮುಲು ಸಂಪರ್ಕದಲ್ಲಿದ್ದಾರೆ ಎನ್ನುತ್ತಿದ್ದಾರೆ. ಅವರು ನಮ್ಮ ಶಾಸಕರನ್ನು ಮುಟ್ಟಿದರೆ ನಾವೂ ಕೂಡ ನಮ್ಮದೇ ಶೈಲಿಯ ರಾಜಕಾರಣ ಮಾಡಬೇಕಾಗುತ್ತದೆ ಎಂದು ತಿರುಗೇಟು ನೀಡಿದರು. ರಾಜ್ಯಪಾಲ ವಿ.ಆರ್.ವಾಲಾ ಅವರ ನಡೆ ಅಸಂವಿಧಾನಿಕವಾಗಿದೆ. ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಹುಮತದ ಕೊರತೆ ಇದ್ದರೂ ಕೂಡ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗೂಡಿ ಜಂಟಿಯಾಗಿ ವಿಧಾನಸೌಧದ ಗಾಂಧಿ ಪ್ರತಿಮೆ ಬಿಳಿ ಕಪ್ಪು ಪಟ್ಟಿ ಮತ್ತು ಗಾಂಧಿ ಟೋಪಿ ಧರಿಸಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಬ್ ನಬಿ ಆಜಾದ್, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹಲೋಟ್, ಮುಖಂಡರಾದ ರಾಮಲಿಂಗಾರೆಡ್ಡಿ, ಆರ್.ವಿ.ದೇಶಪಾಂಡೆ, ಎಸ್.ಆರ್.ಪಾಟೀಲ್, ಕೆ.ಸಿ.ಕೊಂಡಯ್ಯ, ಎಚ್.ಕೆ.ಪಾಟೀಲ್ ಸೇರಿದಂತೆ ಕಾಂಗ್ರೆಸ್‍ನ ಎಲ್ಲಾ 78 ಮಂದಿ ಶಾಸಕರು, ಜೆಡಿಎಸ್‍ನ ಮುಖಂಡರು, ವಿಧಾನಪರಿಷತ್ ಸದಸ್ಯರು, ಸಂಸದರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
Comments