ಬ್ರೇಕಿಂಗ್ ನ್ಯೂಸ್ : ಬಿಜೆಪಿಯ ಕುದುರೆ ವ್ಯಾಪಾರದ ಗುಟ್ಟನು ರಟ್ಟು ಮಾಡಿದ ಮಾಜಿ ಸಚಿವರ ಪುತ್ರ..!!



ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, ಫಲಿತಾಂಶ ಕೂಡ ಹೊರ ಬಿದ್ದಿದೆ. ರಾಜ್ಯದ ಜನರು ಯಾವ ಪಕ್ಷಕ್ಕೂ ಬಹುಮತ ನೀಡದ ಕಾರಣ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣಗೊಂಡಿದ್ದು, ಬಿಜೆಪಿ 104 ಸ್ಥಾನಗಳನ್ನ ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈಗಾಗಲೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಳೆ ಸಂಜೆ 4 ಗಂಟೆಗೆ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ಬಿಜೆಪಿಗೆ ಸುಪ್ರೀಂ ಕೊರ್ಟ್ ಸೂಚಿಸಿದೆ.
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, ಫಲಿತಾಂಶ ಕೂಡ ಹೊರ ಬಿದ್ದಿದೆ. ರಾಜ್ಯದ ಜನರು ಯಾವ ಪಕ್ಷಕ್ಕೂ ಬಹುಮತ ನೀಡದ ಕಾರಣ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣಗೊಂಡಿದ್ದು, ಬಿಜೆಪಿ 104 ಸ್ಥಾನಗಳನ್ನ ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈಗಾಗಲೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಳೆ ಸಂಜೆ 4 ಗಂಟೆಗೆ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ಬಿಜೆಪಿಗೆ ಸುಪ್ರೀಂ ಕೊರ್ಟ್ ಸೂಚಿಸಿದೆ. 78 ಸ್ಥಾನಗಳನ್ನ ಪಡೆದ ಕಾಂಗ್ರೆಸ್, 38 ಸ್ಥಾನಗಳನ್ನ ಪಡೆದ ಜೆಡಿಎಸ್ ಮೈತ್ರಿ ಸರ್ಕಾರ ರಚಿಸಲು ಮುಂದಾಗಿತ್ತು. ಬಹುಮತಕ್ಕಾಗಿ ಬಿಜೆಪಿ ಯವರು ಕೈ-ತೆನೆ ಶಾಸಕರನ್ನು ಸೆಳೆಯಲು ಕುದುರೆ ವ್ಯಾಪಾರ ಶುರು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಿಮ್ಮ ತಂದೆಗೆ ಬೆಂಬಲ ನೀಡುವಂತೆ ಹೇಳಿ ಎಂದು ಸಾಕಷ್ಟು ಕರೆಗಳು ಬರುತ್ತಿವೆ. ಆದರೆ, ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಹಾಗಾಗಿ ಅವಕಾಶಕ್ಕಾಗಿ ಹುಡುಕುವವರಲ್ಲ ಎಂದು ಶಾಸಕ ಹೆಚ್. ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳ ಹಿನ್ನೆಲೆ ಜೆಡಿಎಸ್ ಮತ್ತು ಕಾಂಗ್ರೆಸ್ ತಮ್ಮ ಶಾಸಕರ ಮೇಲೆ ನಿಗಾ ಇಟ್ಟಿವೆ. ಈ ಮಧ್ಯೆ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಅವರಿಗೆ ಗಾಳ ಹಾಕಿರುವ ಬಗ್ಗೆ ಅವರ ಮಗ ಪೂರ್ವಜ್ ವಿಶ್ವನಾಥ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ನಮ್ಮ ತಂದೆಯನ್ನ ಖರೀದಿ ಮಾಡಲು ಸಾಧ್ಯವಿಲ್ಲ. ಕುದುರೆ ವ್ಯಾಪಾರ ಅಥವಾ ಕುದುರೆ ಖರೀದಿಗೆ ಹೆಚ್.ವಿಶ್ವನಾಥ್ ಒಪ್ಪುವುದಿಲ್ಲ. ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಅವಕಾಶ ರಾಜಕಾರಣ ಮಾಡುವುದಕ್ಕೆ ನಮ್ಮ ತಂದೆಗೆ ಬರುವುದಿಲ್ಲ ಎಂದು ಪೂರ್ವಜ್ ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ 'ಈನಾಡು' ಜೊತೆ ದೂರವಾಣಿ ಮೂಲಕ ಮಾತನಾಡಿದ ಪೂರ್ವಜ್ ವಿಶ್ವನಾಥ್, ನಿಮ್ಮ ತಂದೆ 100 ಕೋಟಿ ಕೊಡುತ್ತೇವೆ. ಬಿಜೆಪಿ ಬೆಂಬಲ ಕೊಡುವಂತೆ ಹೇಳಿ ಎಂದು ಕರೆ ಬರುತ್ತಿವೆ. ನಮ್ಮ ತಂದೆ ದುಡ್ಡಿನ ಆಸೆಗೆ ರಾಜಕಾರಣ ಮಾಡುತ್ತಿಲ್ಲ. ಆದರೆ, ಕರೆ ಮಾಡಿದವರ ಹೆಸರನ್ನ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.
Comments