ಬಿಜೆಪಿ ಆಫರ್ ನಿರಾಕರಿಸಿದ ‘ಕೈ’ಶಾಸಕ..!
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಾಕಷ್ಟು ಗೊಂದಲಗಳ ನಡುವೆಯೂ ನೂತನ ಮುಖ್ಯಮಂತ್ರಿ ಆಯ್ಕೆಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಸಾಬೀತು ಮಾಡಬೇಕಿದೆ. ಇದೀಗ ಬಿ.ಎಸ್.ಯಡಿಯೂರಪ್ಪನವರೇ ಕುದುರೆ ವ್ಯಾಪಾರಕ್ಕೆ ಕೈ ಹಾಕಿದ್ದಾರೆ ಎಂಬ ಸ್ಪೋಟಕ ಮಾಹಿತಿ ಒಂದು ಹೊರಬಿದ್ದಿದೆ.
ಕಾಂಗ್ರೆಸ್ ಶಾಸಕರನ್ನು ತನ್ನತ್ತಾ ಸೆಳೆಯಲು ಬಿಜೆಪಿ ಶತ ಪ್ರಯತ್ನ ಮುಂದುವರೆಸಿದೆ.ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರಿಗೆ ಬಿಜೆಪಿ ಆಫರ್ ನೀಡಿದೆ. ಬಹುಮತ ಸಾಬೀತುಪಡಿಸುವಾಗ ಬೆಂಬಲ ನೀಡುವಂತೆ ಮನವಿಯನ್ನು ಮಾಡಿದ್ದಾರೆ. ಆದರೆ, ಅವರು ಈ ಆಫರ್ ಅನ್ನು ನಿರಾಕರಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿರುವ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಭದ್ರಾವತಿಯಲ್ಲಿ ಮಾತ್ರ ಕಾಂಗ್ರೆಸ್ ಜಯ ಸಾಧಿಸಿದೆ. ಇನ್ನುಳಿದ 6 ಕ್ಷೇತ್ರಗಳಲ್ಲಿ ಬಿಜೆಪಿ ಜಯಸಾಧಿಸಿದೆ. ಆದ್ದರಿಂದ, ಬಿ.ಕೆ.ಸಂಗಮೇಶ್ ಅವರಿಗೆ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಲಾಗಿದೆ ಎನ್ನಲಾಗುತ್ತಿದೆ.
Comments