ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ, ಸಿಎಂ ಸ್ಥಾನಕ್ಕೂ ರಾಜೀನಾಮೆ ನೀಡ್ತಾರಾ?

ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಈಗಾಗಲೇ ಸಕಲ ತಯಾರಿಯು ನಡೆಯುತ್ತಿದ್ದು, ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಪ್ರಮಾಣ ವಚನವನ್ನು ಈಗಾಗಲೇ ಸ್ವೀಕರಿಸಿದ್ದಾರೆ.
ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಹಾಗೂ ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಗೆದ್ದಿರುವ ಜೆಡಿಎಸ್ ವರಿಷ್ಠರಾದ ಎಚ್.ಡಿ.ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹುಮತ ಸಾಬೀತು ಪಡಿಸಲು ಕ್ಷಣಗಳನ್ನು ಲೆಕ್ಕ ಹಾಕುತ್ತಿರುವ ಬಿಜೆಪಿಯು ಆಪರೇಷನ್ ಕಮಲ ನಡೆಯದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ.
Comments