ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತು ಡಿಕೆಶಿ ಹೇಳಿದ್ದು ಹೀಗೆ...!!

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುತ್ತಿದ್ದು, ಬುಧವಾರ ಮುಖ್ಯಮಂತ್ರಿಯಾಗಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ಜಾತ್ಯತೀತ ಸರ್ಕಾರ ಇರಬೇಕು ಎಂಬ ನಿರ್ಧಾರ ಕೈಗೊಂಡಿದ್ದು, ಇಡೀ ದೇಶಕ್ಕೆ ಇದರ ಅಗತ್ಯತೆ ಇದೆ. ಅದೇ ಕಾರಣಕ್ಕಾಗಿ ನಾವು ಜೆಡಿಎಸ್ ನೊಂದಿಗೆ ಮೈತ್ರಿ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಮೈತ್ರಿ ಸರ್ಕಾರ ಮುಂದಿನ ಐದು ವರ್ಷಗಳ ಕಾಲ ಪೂರೈಸಲಿದೆಯೇ ಎಂಬ ಪ್ರಶ್ನೆಗೆ, ಇದಕ್ಕೆ ಸಮಯವೇ ಉತ್ತರಿಸಲಿದೆ. ಈಗ ನಾನು ಅದರ ಕುರಿತು ಉತ್ತರಿಸುವುದಿಲ್ಲ ಎಂದಿದ್ದಾರೆ. ನಮ್ಮ ಮುಂದೆ ಅನೇಕ ಸವಾಲುಗಳಿದ್ದು, ಅವುಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆ ಇಡಲಾಗುವುದು ಎಂದರು.
Comments