ಬ್ರೇಕಿಂಗ್ ನ್ಯೂಸ್ : ಕುಮಾರಣ್ಣನ ಜೊತೆ ರಾಜ್ಯದ ಮೊದಲ ದಲಿತ ಡಿ.ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವವರು ಇವರೇ..!?
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ನಾಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಪಕ್ಷದ ಸರ್ಕಾರವು ಅಸ್ತಿತ್ವಕ್ಕೆ ಬರಲಿದೆ.
ಇದೇ ಸಮಯದಲ್ಲಿ ನಾಳೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮೊಟ್ಟ ಮೊದಲ ದಲಿತ ಡಿ.ಸಿಎಂ ಆಗಿ ಡಾ.ಜಿ ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕ ರಾಜ್ಯದಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಜಂಟಿಯಾಗಿ ಅಧಿಕಾರ ನಡೆಸುವುದಕ್ಕೆ ಮುಂದಾಗಿದೆ. ಈ ನಡುವೆ ಸಮ್ಮಿಶ್ರ ಸರ್ಕಾರದಲ್ಲಿ ಡಿ.ಸಿಎಂ ಪಟ್ಟಕ್ಕೆ ಭಾರಿ ಡಿಮ್ಯಾಂಡ್ ಏರ್ಪಟ್ಟಿತ್ತು. ಈ ನಡುವೆ ಜೆಡಿಎಸ್ ಹಾಗೂ ಕಾಂಗ್ರೆಸ್ ವರಿಷ್ಠರು ಮೊದಲು ಪ್ರಮಾಣ ವಚನ ಸ್ವೀಕಾರ ಮಾಡಿ, ಕ್ಯಾಬಿನೆಟ್ ರಚನೆಯಾದ ನಂತರ ಮತ್ತೊಂದು ಡಿ.ಸಿಎಂ ಹುದ್ದೆ ಭರ್ತಿ ಬಗ್ಗೆ ಒಮ್ಮತ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Comments