ರಾಮನಗರದಲ್ಲಿ ಜೆಡಿಎಸ್ ವಿರುದ್ದ ಕಣ್ಣಕ್ಕಿಳಿಯುತ್ತಾರಾ ಯೋಗಿ?
ರಾಮನಗರ ಉಪಚುನಾವಣೆಗೆ ಮತ್ತೆ ಜಿದ್ದಾಜಿದ್ದಿಯ ಪೈಪೋಟಿ ಎದುರಾಗುವ ಎಲ್ಲಾ ಸಾಧ್ಯತೆಯಿದೆ. ಚನ್ನಪಟ್ಟಣದಲ್ಲಿ ಹೆಚ್.ಡಿ.ಕೆ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ರಾಮನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಭವ ಇದೆ ಎನ್ನಲಾಗುತ್ತಿದೆ.
ಆಗಲೇ ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಹೆಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣವನ್ನು ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಹೆಚ್'ಡಿಕೆ ರಾಮನಗರಕ್ಕೆ ರಾಜೀನಾಮೆ ನೀಡಿರುವ ಕಾರಣ ಕೆಲವು ದಿನಗಳಲ್ಲಿ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕವನ್ನು ಘೋಷಿಸಲಿದ್ದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷ ಹಾಗೂ ವಿರೋಧ ಪಕ್ಷ ಬಿಜೆಪಿ ಕ್ಷೇತ್ರವನ್ನು ತಮ್ಮ ತೆಕ್ಕೆಯಲ್ಲಿ ಉಳಿಸಿಕೊಳ್ಳಲು ಶತಾಯಗತಾಯ ಪೂರ್ವ ತಯಾರಿ ನಡೆಸುತ್ತಿವೆ ಎಂದು ಹೇಳಲಾಗುತ್ತಿದೆ
Comments