ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಕುಮಾರಸ್ವಾಮಿ

ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಸಾಕಷ್ಟು ಗೊಂದಲುಗಳು ಸೃಷ್ಟಿಯಾಗಿದ್ದವು. ಮುಂದಿನ ರಾಜ್ಯದ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆಯೂ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು.
ಅದಕ್ಕೆಲ್ಲಾ ತೆರೆ ಎಳೆಯುವಂತೆ ಇಂದು ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಮೊದಲು ಹೆಚ್ಡಿಕೆ ಅವರು ನಾಡ ಅಧಿದೇವತೆಯಾದ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಲಿದ್ದಾರೆ. ಬೆಳಗ್ಗೆ 8.20 ಕ್ಕೆ ಹೆಲಿಕಾಪ್ಟರ್ ಮೂಲಕ ಲಲಿತ್ ಮಹಲ್ ಹೆಲಿಪ್ಯಾಡ್ ಗೆ ಬಂದಿಳಿದಿದ್ದು, 8.45 ಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
Comments