ನಿಫಾ ವೈರಸ್- ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಕ್ಕೆ ನಿಯೋಜಿತ ಸಿಎಂ ಹೆಚ್ಡಿಕೆ ಆದೇಶ

ಕೇರಳ ರಾಜ್ಯದಲ್ಲಿ ಈಗಾಗಲೇ ಮಾರಕ ನಿಫಾ ವೈರಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕೂಡ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ನಿಯೋಜಿತ ಮುಖ್ಯಮಂತ್ರಿಯಾದ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾರಕ ನಿಪಾಹ್ ವೈರಾಣು ಕೇರಳದಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಹತ್ತು ಮಂದಿ ನಿಫಾ ಗೆ ಬಲಿಯಾಗಿದ್ದಾರೆ. ಕೇರಳಕ್ಕೆ ಹೊಂದಿಕೊಂಡಿರುವ ನಮ್ಮ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಈ ವೈರಾಣು ವ್ಯಾಪಿಸುವ ಎಲ್ಲಾ ಸಾಧ್ಯತೆಗಳಿವೆ. ಆದ್ದರಿಂದ ವೈರಾಣು ಸೋಂಕು ತಡೆಯಲು ಅಗತ್ಯ, ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅದರ ಮುಖ್ಯ ಕಾರ್ಯದರ್ಶಿಗಳಿಗೆ ನಾನು ಈಗಾಗಲೇ ಆದೇಶಿಸಿದ್ದೇನೆ,ಎಂದು ಎಚ್.ಡಿ.ಕೆ ತಿಳಿಸಿದ್ದಾರೆ.
.
Comments