ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಡಾ. ಜಿ ಪರಮೇಶ್ವರ್

ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷರಾದ ಹುದ್ದೆಗೆ ಜಿ ಪರಮೇಶ್ವರ್ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜೀನಾಮೆ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿರುವ ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗಲಿದೆ. ನನಗಿಂತ ಉತ್ತಮರನ್ನು ಹೈ ಕಮಾಂಡ್ ಆಯ್ಕೆ ಮಾಡಲಿದೆ ಅಂತ ಹೇಳಿದ್ದಾರೆ. ಇದೇ ಸಮಯದಲ್ಲಿ ಅವರು ನಾನು ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಆಗುತ್ತಿರುವ ಹಿನ್ನೆಲೆ ಸರ್ಕಾರದಲ್ಲಿ ಸಂಪೂರ್ಣವಾಗಿ ತೊಡಗಬೇಕು ಹೀಗಾಗಿ ನಾನು ಎರಡೂ ಹುದ್ದೆಯನ್ನು ನಿಭಾಯಿಸಲು ನನಗೆ ಕಷ್ಟವಾಗುತ್ತದೆ. ಹೀಗಾಗಿ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವೆ ಅಂತ ತಿಳಿಸಿದರು.
Comments