ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಪ್ರಮಾಣವಚನ

ಕರ್ನಾಟಕ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಅವರು ಇಂದು ಸಂಜೆ ವಿಧಾನಸೌಧದ ಮುಂಭಾಗ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣವಚನವನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಯುಪಿಎ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Comments