ಸ್ಪೋಟಕ ಸುದ್ದಿ : ಬಿ.ಎಸ್.ವೈ ಗೆ ಕಾದಿದೆ ಬಿಗ್ ಶಾಕ್..!!
ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದಿರುವ ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ದೊಡ್ಡಮಟ್ಟದ ಶಾಕಿಂಗ್ ಸುದ್ದಿಯೊಂದು ಬಿಜೆಪಿ ಹೈಕಮಾಂಡ್ ನೀಡಲಿದೆ ಎನ್ನಲಾಗುತ್ತಿದೆ.
ಸದ್ಯ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಸಮಿಶ್ರ ಸರ್ಕಾರವನ್ನು ರಚನೆ ಮಾಡಿದ್ದು, ಅಧಿಕಾರವನ್ನು ಶುರುಮಾಡಿದೆ. ಈ ನಡುವೆ ವಿಧಾನ ಸಭೆಯ ವಿರೋಧ ಪಕ್ಷದ ಸಭಾ ನಾಯಕನಾಗಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯನಿರ್ವಹಣೆ ಮಾಡಬೇಕಾಗಿರುವುದರಿಂದ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡುವ ಸಂಭವವಿದೆ ಎನ್ನಲಾಗುತ್ತಿದೆ. ಅಡಳಿತ ರೂಢ ಪಕ್ಷಗಳ ವಿರುದ್ದ ವಿರೋಧ ಪಕ್ಷಗಳು ಪ್ರತಿಕ್ಷಣ ಕೂಡ ಎಚ್ಚರಿಂದ ವರ್ತನೆ ಮಾಡಬೇಕಾಗುತ್ತದೆ. ಅಡಳಿತ ಪಕ್ಷದ ಕೆಲಸ, ಕಾರ್ಯ, ರೀತಿ ನಡವಳಿಕೆ ಬಗ್ಗೆ ಸದನ ಸೇರಿದಂತೆ ಹೊರಗೆ ಕೂಡ ಖಂಡನೆ ಮಾಡಿ ಅದನ್ನು ಜನರ ಮುಂದೆ ತೆರೆದಿಡುವ ಕೆಲಸವನ್ನು ವಿರೋಧ ಪಕ್ಷದವರು ಮಾಡುವುದು ಹೆಚ್ಚು, ಹೀಗಾಗಿ ಅತಿ ದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರೇ ವಿರೋಧ ಪಕ್ಷದ ನಾಯಕನಾಗಿ ಸದನದಲ್ಲಿ ಕಾರ್ಯನಿರ್ವಹಿಸುವುದು ಹೆಚ್ಚು ಸೂಕ್ತ ಎನ್ನಲಾಗಿದೆ.
ಇದಲ್ಲದೆ ಶಾಸಕಾಂಗ ಪಕ್ಷದ ನಾಯಕನಾಗಿ ಕೂಡ ಬಿ.ಎಸ್.ವೈ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಬಿ.ಎಸ್.ಯಡಿಯೂರಪ್ಪ ಅವರು ಮಿಂಚಾಲಿದ್ದಾರೆ. ಇನ್ನು ಸದನದಲ್ಲಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಸಹಜವಾಗಿ ರಾಜ್ಯದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುವುದುಕ್ಕೆ ಕೂಡ ತೊಂದರೆಯುಂಟಾಗುವುದು ಎನ್ನುವ ಕಾರಣದಿಂದ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಡುಗಡೆ ಮಾಡಿ ಹೆಚ್ಚಿನ ಸಮಯವನ್ನು ವಿರೋಧ ಪಕ್ಷದ ನಾಯಕನಾಗಿ ಅನುವು ಮಾಡಿಕೊಡುವ ಉದ್ದೇಶವನ್ನು ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇನ್ನು ಬಲ್ಲ ಮೂಲಗಳ ಪ್ರಕಾರ ಒಂದು ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಗೆ ಹೈಕಮಾಂಡ್ ಮುಂದಾದ್ರೆ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರನ್ನೇ ನೇಮಕ ಮಾಡಲಿದೆ ಎನ್ನಲಾಗುತ್ತಿದೆ.
Comments