ಯಾರಗಲಿದ್ದಾರೆ ಮುಂದಿನ ವಿಧಾನಸಭೆಯ ನೂತನ ಸ್ಪೀಕರ್?

ಕರ್ನಾಟಕ ರಾಜ್ಯ ವಿಧಾನಸಭೆಗೆ ನೂತನ ಸ್ಪೀಕರ್ ಆಯ್ಜೆ ಮಾಡುವ ಸಲುವಾಗಿ ಶೀಘ್ರದಲ್ಲಿಯೇ ಚುನಾವಣೆ ನಡೆಯಲಿದೆ.
ಇದರ ನಡುವೆ ಕಾಂಗ್ರೆಸ್ ಹಾಗೂ ಜೆಡಿಎಸ್ನ ಸಮಿಶ್ರ ಸರ್ಕಾರದಿಂದ ಒಮ್ಮತ ಅಭ್ಯರ್ಥಿಯಾಗಿ ಶ್ರೀನಿವಾಸ ಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್.ರಮೇಶ್ ಕುಮಾರ್ ಅವರನ್ನು ವಿಧಾನಸಭೆ ಸಭಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ ಮಾಡಿದೆ ಎನ್ನಲಾಗುತ್ತಿದೆ. ಈ ನಡುವೆ ಬಿಜೆಪಿಯಿಂದ ರಾಜರಾಜಿನಗರ ಕ್ಷೇತ್ರದ ಶಾಸಕ, ಸುರೇಶ್ ಕುಮಾರ್ ಅವರನ್ನು ಕೂಡ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಸಾಕಷ್ಟು ಪೈಪೋಟಿ ನಡೆಸಿದ್ದಾರೆ. ಇವೆಲ್ಲದರ ನಡುವೆ ಕೆ.ಆರ್.ರಮೇಶ್ ಕುಮಾರ್ ಹಾಗೂ ಸುರೇಶ್ ಕುಮಾರ್ ಅವರು ಇಂದು ತಮ್ಮ ಪಕ್ಷದ ನಾಯಕರೊಂದಿಗೆ ತಮ್ಮ ತಮ್ಮ ನಾಮಪತ್ರಗಳನ್ನು ಸಲ್ಲಿದ್ದಾರೆ.
Comments