ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಬಂದ್-ಬಿಎಸ್ ವೈ?

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ರೈತರ ಸಾಲ ಮನ್ನಾ ಮಾಡದಿದ್ದರೆ ಮೇ.28ರಂದು ಸೋಮವಾರ ಕರ್ನಾಟಕ ಬಂದ್'ಗೆ ಕರೆ ನೀಡುವುದಾಗಿ ವಿರೋಧ ಪಕ್ಷದ ನಾಯಕರಾದ ಬಿ.ಎಸ್. ವೈ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ವೈ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣಾ ಪೂರ್ವ ಜೆಡಿಎಸ್ ಪಕ್ಷ ನೀಡಿದ ಭರವಸೆಯಂತೆ ರೈತರ ಸಾಲವನ್ನು ಇಂದು ಸಂಜೆಯೊಳಗೆ ಸಂಪೂರ್ಣ ಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್'ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ವಿಪಕ್ಷ ನಾಯಕರಾದ ಬಿ.ಎಸ್.ಯಡಿಯೂರಪ್ಪ ಒಳಗೊಂಡ ಬಿಜೆಪಿ ಸದಸ್ಯರು ಸದನದಿಂದ ಹೊರ ನಡೆದಿದ್ದಾರೆ.
Comments