ರೈತರ ಸಾಲ ಮನ್ನಾ ಆದರೆ ಮಾತ್ರ ಬಂದ್ ವಾಪಸ್- ಕೆ.ಎಸ್ ಈಶ್ವರಪ್ಪ

ಬಹುಮತ ಸಾಬೀತು ಪಡಿಸಿಕೊಂಡ ಮುಖ್ಯಮಂತ್ರಿ ಹೆಚ್ .ಡಿ. ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ವಿಚಾರದಲ್ಲಿ ಯು ಟರ್ನ್ ಹೊಡೆದಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಗರಂ ಆಗಿದ್ದಾರೆ.
ಹರಿಹರ ತಾಲೂಕಿನ ಬೆಳ್ಳೂಡಿಯ ಕಾಗಿನೆಲೆ ಪೀಠದಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಸಿಎಂ ಸೋಮವಾರದವರೆಗೆ ಸಮಯ ಕೊಟ್ಟಿದ್ದೇವೆ. ರೈತರ ಸಾಲ ಮನ್ನಾ ಮಾಡಿದರೆ ಬಂದ್ ಗೆ ನೀಡಿರುವ ಕರೆ ವಾಪಸ್ ಪಡೆಯುತ್ತೇವೆ, ಇಲ್ಲದಿದ್ದರೆ ಕರ್ನಾಟಕ ಬಂದ್ ಮಾಡುವುದು ಶತಸಿದ್ಧ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಖಂಡಿತ ಆರು ತಿಂಗಳು ಕೂಡ ಇರುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಭವಿಷ್ಯ ಹೇಳಿದ್ದಾರೆ.
Comments