ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್..!?
ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಚಿವ ಸಂಪುಟ ವಿಸ್ತರಣೆಯು ಬುಧವಾರ ನಡೆಯುವ ಎಲ್ಲಾ ಸಾಧ್ಯತೆಗಳಿದ್ದು. ಕಾಂಗ್ರೆಸ್‍ನಿಂದ ಸಚಿವರಾಗುವವರ ಪಟ್ಟಿಯನ್ನು ಮುಖ್ಯಮಂತ್ರಿ ನಿರೀಕ್ಷಿಸುತ್ತಿದ್ದು, ಆ ಪಟ್ಟಿ ದೊರೆತ ಕೂಡಲೇ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಲಿದ್ದಾರೆ ಎಂದು ಮೂಲಗಳು ಈಗಾಗಲೇ ತಿಳಿಸಿವೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಚ್’ಡಿಕೆ ಮುಖ್ಯಮಂತ್ರಿಯಾಗಿದ್ದು ಹಾಗೂ ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿದ್ದಾರೆ. ನಿರೀಕ್ಷೆಯಂತೆ ಎರಡು ಪಕ್ಷಗಳಲ್ಲಿ ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನದ ಬಿಕ್ಕಟ್ಟು ಸಾಮಾನ್ಯವಾಗಿ ಬಗೆಹರಿದರೆ ಬಾಕಿ ಉಳಿದಿರುವಂತಹ 32 ಸಚಿವ ಸ್ಥಾನಗಳ ಪೈಕಿ ಮೊದಲ ಹಂತದಲ್ಲಿ ಜೆಡಿಎಸ್‍ನಿಂದ 10, ಕಾಂಗ್ರೆಸ್‍ನಿಂದ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಮೂಲಗಳು ವರದಿ ಮಾಡಿವೆ.
Comments