ಬಿಗ್ ಬ್ರೇಕಿಂಗ್ : ರಾಜ್ಯ ರಾಜಕೀಯಕ್ಕೆ ವಿದಾಯ ಹೇಳುದ್ರಾ ಮಾಜಿ ಸಿ.ಎಂ ಸಿದ್ದರಾಮಯ್ಯ..!?
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ತಿರುಗಿಬಿದ್ದು, ಬಿಜೆಪಿಯನ್ನು ಸಮರ್ಥವಾಗಿ ಎದುರಿಸಿದ್ದರು. ಆದರೆ ಚುನಾವಣಾ ಫಲಿತಾಂದ ಬಳಿಕ ರಾಜ್ಯದಲ್ಲಿ ಅಡಳಿತರೂಢ ಪಕ್ಷಕ್ಕೆ ಸರಿಯಾದ ಬಹುಮತ ಬಾರದೇ ಕಾಂಗ್ರೆಸ್ ಸೋತು ಸುಣ್ಣವಾಗಿ ಹೋಗಿ ಈಗ ಜೆಡಿಎಸ್ ಜೊತೆಗೆ ಅಧಿಕಾರವನ್ನು ಹಂಚಿಕೊಂಡಿದೆ.
ಈ ನಡುವೆ ರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ತಮ್ಮದೇ ಆದ ಗತ್ತಿನಿಂದ, ಎದುರಾಳಿ ಅದರಲ್ಲೂ ಬಿಜೆಪಿಯನ್ನು ಸಮರ್ಥವಾಗಿ ಕಟ್ಟು ಹಾಕುವ ಬಗ್ಗೆ ಸುದ್ದಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಮೋದಿ ಎದುರಾಳಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ಪುಟ್ಷಿ ನೀಡುವಂತೆ ತಮಗೆ ರಾಜಕೀಯವಾಗಿ ಮರು ಹುಟ್ಟು ನೀಡಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲನ್ನು ಅನುಭವಿಸಿರುವ ಸಿದ್ದರಾಮಯ್ಯ ಒಳಗೊಳಗೆ ಕುಗ್ಗಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವಿಷಯಕ್ಕಾಗಿ ಮುಂಬರುತ್ತಿರುವ ಲೋಕಸಭಾ ಚುನಾವಣೆಯ ಅಖಾಡಕ್ಕಿಳಿಯುವುದರ ಬಗ್ಗೆ ಸದ್ಯದ ಮಟ್ಟಿಗೆ ಯಾವುದೇ ರೀತಿಯ ಮನಸ್ಸುಮಾಡಿಲ್ಲ ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ರಾಜಕೀಯ ಬಿಟ್ಟರು ಬಿಡಬಹುದು..ಹೇಳುವುದಕ್ಕೆ ಆಗುವುದಿಲ್ಲ.
Comments