ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ: ಸಂಸದ ಪ್ರತಾಪ್ ಸಿಂಹ ಅವರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು
ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿಯು ಕರೆ ನೀಡಿದಂತಹ ಕರ್ನಾಟಕ ಬಂದ್ ಗೆ ರಾಜ್ಯದೆಲ್ಲೆಡೆ ರಾಜ್ಯವ್ಯಾಪ್ತಿ ನೀರಸ ಪ್ರತಿಕ್ರಿಯೆಯು ವ್ಯಕ್ತವಾಗಿದೆ.
ಮೈಸೂರಿನ ಬನ್ನಿಮಂಟಪದ ಬಳಿ ಮೈಸೂರಿನ ಸಂಸದ ಪ್ರತಾಪ್ ಸಿಂಹ ಜೊತೆ ಬಿಜೆಪಿ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಸಂಸದ ಪ್ರತಾಪ್ ಸಿಂಹ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜ್ಯವ್ಯಾಪಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೋಲಾರ , ಕೊಪ್ಪಳ , ಧಾರವಾಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಪ್ರದೇಶದಲ್ಲಿ ಬಸ್ಸು ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆದಿದೆ.
Comments