ಇಂದು ಪ್ರಧಾನ ಮಂತ್ರಿಯನ್ನು ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆದ ನಂತರ ಇದೇ ಮೊದಲ ಬಾರಿಗೆ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಹೆಚ್.ಡಿ.ಕೆಯವರು ದೆಹಲಿಯ ರಾಜ್ ಘಾಟ್ ನಲ್ಲಿರುವ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಲಿದ್ದಾರೆ. ನಂತರ ಮಧ್ಯಾಹ್ನ 3.30 ಕ್ಕೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆಯಲ್ಲಿ ರಾಜ್ಯದ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದು, ಆಡಳಿತಾತ್ಮಕವಾಗಿ ಸಹಕಾರ ನೀಡುವಂತೆ ಮನವಿಯನ್ನು ಮಾಡಿಕೊಳ್ಳಲಿದ್ದಾರೆ. ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿಯನ್ನು ಮಾಡಲಿದ್ದಾರೆ.
Comments