'ಕೈ' ಪಕ್ಷದ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಗೆ ಹೈಕಮಾಂಡ್ ಕೊಡಲಿರುವ ಬಂಪರ್ ಗಿಫ್ಟ್..!!

ಕಾಂಗ್ರೆಸ್‌ನ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಇಂಧನ ಖಾತೆ ದೊರೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಶಿವ ಕುಮಾರ್ ಅವರಿಗೆ ಇಂಧನ ಖಾತೆ ನೀಡುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳಲಿ ಎಂಬುದು ಹೈಕಮಾಂಡ್ ಬಯಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಇಂಧನ ಖಾತೆ ದೊರೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಶಿವ ಕುಮಾರ್ ಅವರಿಗೆ ಇಂಧನ ಖಾತೆ ನೀಡುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳಲಿ ಎಂಬುದು ಹೈಕಮಾಂಡ್ ಬಯಸುತ್ತಿದೆ. ಆದರೆ, ಅಧ್ಯಕ್ಷ ಹುದ್ದೆಯ ಜತೆಗೆ ಇಂಧನ ಖಾತೆಯೂ ಬೇಕು ಎಂಬುದು ಶಿವಕುಮಾರ್ ಬೇಡಿಕೆ. ಹೀಗಾಗಿ, ಅಧ್ಯಕ್ಷ ಹುದ್ದೆಯ ಬಗ್ಗೆ ತೀರ್ಮಾನ ಕೈಗೊಳ್ಳದ ಹೈಕಮಾಂಡ್, ಇಂಧನ ಖಾತೆ ನೀಡುವುದಕ್ಕೆ ಯಾವುದೇ ಅಭ್ಯಂತರ ಹೊಂದಿಲ್ಲ ಎನ್ನಲಾಗಿದೆ. ಜೆಡಿಎಸ್ ಕೂಡ ಇಂಧನ ಖಾತೆಗಾಗಿ ಪಟ್ಟು ಹಿಡಿದಿದೆ. ಈ ಹಿಂದೆ ಕುಮಾರಸ್ವಾಮಿ ಅವರ ಸಂಪುಟದಲ್ಲಿ ಇಂಧನ ಖಾತೆ ನಿರ್ವಹಿಸಿದ್ದ ಎಚ್.ಡಿ. ರೇವಣ್ಣ ಅವರೂ ಇಂಧನ ಖಾತೆಯ ಮೇಲೆ ಒಲವು ಹೊಂದಿದ್ದರು. ಆದರೆ, ಶಿವಕುಮಾರ್ ಅವರು ಈ ಬಗ್ಗೆ ಜೆಡಿಎಸ್ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದು, ಇಂದನ ಖಾತೆಯನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಜೆಡಿಎಸ್ ನಾಯಕತ್ವದ ಮನವೊಲಿಸಿದ್ದಾರೆ ಎನ್ನಲಾಗಿದೆ.
Comments