ಭೀತಿಗೊಳಗಾಗಿರುವ ಬಿಜೆಪಿಗೆ ಎದುರಾಗಿದೆ ಸಂಕಷ್ಟ...ಏನು ಗೊತ್ತಾ?

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿ ಮಾಡಿಕೊಳ್ಳುವಲ್ಲಿ ವಿಫಲವಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಹಾರಾಷ್ಟ್ರ ಬಿಜೆಪಿ ಹಿರಿಯ ಮುಖಂಡ ಚಂದ್ರಕಾಂತ್ ಪಾಟೀಲ್ ಎಚ್ಚರಿಕೆ ನಿಡಿದ್ದಾರೆ.
ಬಿಜೆಪಿ ಹಾಗೂ ಉದ್ದವ್ ಠಾಕ್ರೆ ನೇತೃತ್ವದ ಶಿವ ಸೇನೆಯೂ ಇಂದು ನಡೆಯುತ್ತಿರುವ ಪಹಲ್ಗಾರ್ ಉಪ ಚುನಾವಣೆಯ ಪ್ರಚಾರ ಕಾರ್ಯದ ವೇಳೆ ಪರಸ್ಪರ ವಾಗ್ದಾಳಿ ನಡೆಸಿಕೊಂಡಿದ್ದು ಇದೇ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ. ಸದ್ಯ ಕರ್ನಾಟಕದಲ್ಲಿಯೂ ಕೂಡ ಬಿಜೆಪಿ ಹೆಚ್ಚಿನ ಪಡೆದಾಗ್ಯೂ ಕೂಡ ಸರ್ಕಾರ ರಚನೆಯ ಅವಕಾಶವನ್ನು ಕಳೆದುಕೊಂಡಿದ್ದು, ಇದೇ ರೀತಿ ಮುಂದುವರಿದರೇ ಮಹಾರಾಷ್ಟ್ರದಲ್ಲಿಯೂ ಕೂಡ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದ್ದರಿಂದ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಹೇಳಿದ್ದಾರೆ.
Comments