ಜೂನ್ ತಿಂಗಳಲ್ಲಿ ಮೈತ್ರಿ ಸರ್ಕಾರದ ಮೊದಲ ಬಜೆಟ್ ಮಂಡನೆ

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರವು ಅಸ್ತಿತ್ವಕ್ಕೆ ಬಂದ ಮೇಲೆ ಮೊದಲ ಆಯವ್ಯಯ ಪತ್ರದ ಮಂಡನೆಗೆ ಮುಹೂರ್ತವು ನಿಗದಿಯಾಗಿದೆ.
ಹಣಕಾಸು ಖಾತೆಯು ಯಾರಿಗೆ ಸಿಗಲಿದೆ ಎಂಬುದರ ಬಗ್ಗೆ ಭಾರಿ ಚರ್ಚೆಯು ನಡೆದಿತ್ತು. ಈ ನಡುವೆ ಹಣಕಾಸು ಖಾತೆಯನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿರುವ ಸುದ್ದಿಗಳು ಕೇಳಿ ಬಂದಿದೆ. ಹಾಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಮುಂಗಡ ಪತ್ರವನ್ನು ಜೂನ್ ತಿಂಗಳಲ್ಲೇ ಮಂಡಿಸಲು ತೀರ್ಮಾನ ಮಾಡಲಾಗಿದೆಯಂತೆ. ಕಾಂಗ್ರೆಸ್ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿಕೊಂಡು ಬಂದಿರುವ ಕುಮಾರಸ್ವಾಮಿ ಅವರು ಸಧ್ಯದಲ್ಲೆ ಜಂಟಿ ಅಧಿವೇಶನ ಕರೆಯುವ ನಿರೀಕ್ಷೆಯಿದೆ ಎಂದಿದ್ದಾರೆ.
Comments