ಸಾಲ ಮನ್ನಾದ ಕುರಿತು ಇಂದು ಅಧಿಕೃತ ಘೋಷಣೆ ನಿರೀಕ್ಷೆ..!

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದನಿಂದಲೂ ಕೂಡ ಸಾಲ ಮನ್ನಾದ ವಿಚಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.ರೈತರ ಸಾಲ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸೌಧದಲ್ಲಿ ಸಭೆಯನ್ನು ನಡೆಸುತ್ತಿದ್ದಾರೆ. ರೈತರ ಸಾಲ ಮನ್ನಾ ಕುರಿತು ಇಂದು ಅಧಿಕೃತವಾಗಿ ಘೋಷಣೆಯಾಗುವ ನಿರೀಕ್ಷೆ ಇದೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಉಪ ಮುಖ್ಯಮಂತ್ರಿಯಾದ ಡಾ.ಜಿ.ಪರಮೇಶ್ವರ್ ಜೊತೆಗೆ ನೂರಾರು ರೈತರು ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಭೆಗೆ ಆಗಮಿಸುತ್ತಿದ್ದಾರೆ. ಪ್ರಕೃತಿ ವಿಕೋಪದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ, ಸಾಲವನ್ನು ಸಂಪೂರ್ಣವಾಗಿ ಮನ್ನಾಮಾಡಬೇಕು' ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿಧಾನಸೌಧದ ಬಳಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ತಿಳಿಸಿದರು.
Comments